ದೊರೆನ್ಯೂಸ್ (ದೇವದುರ್ಗ): ತಾಲೂಕಿನ ಕಕ್ಕಲದೊಡ್ಡಿ ಗ್ರಾಮದಲ್ಲಿ ಅನೇಕರು ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಶಾಲಾ ದಾಖಲೆಗಳನ್ನು ತಿದ್ದುಪಡಿ ಮಾಡಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದು ಆ ಬಗ್ಗೆ ತನಿಖೆ ನಡೆಸುವಂತೆ ಕ್ಷೇತ್ರ ಶಿಕ್ಷಣಾಧಿಕರಿಗಳಿಗೆ ಹೈದ್ರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಮುಖಂಡರು ಮನವಿ ಸಲ್ಲಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ಜಿಲ್ಲಾ ಮುಖಂಡ ರಾಚಣ್ಣ ನಾಯಕ, ಕೊಕ್ಕಲದೊಡ್ಡಿಯಲ್ಲಿ ಅನ್ಯ ಸಮಾಜದ ಒಂದು ಕುಟುಂಬದಲ್ಲಿ ಅನೇಕ ಸದಸ್ಯರು ಪರಿಶಿಷ್ಟ ಪಂಗಡ ನಾಯಕ, ವಾಲ್ಮೀಕಿ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದರು.
ಜಿಲ್ಲೆಯಲ್ಲಿ ಅದರಲ್ಲೂ ದೇವದುರ್ಗ ತಾಲೂಕಿನಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಶಾಲಾ ದಾಖಲೆಗಳನ್ನು ಬೇಕಾಬಿಟ್ಟಿ ತಿದ್ದುಪಡಿ ಮಾಡಿ ಪರಿಶಿಷ್ಟ ಪಂಗಡ ಜನಾಂಗಕ್ಕೆ ಮೋಸ ಮಾಡುತ್ತಿದ್ದಾರೆ. ಈ ಭಾಗದಲ್ಲಿ ವಾಲ್ಮೀಕಿ, ನಾಯಕ, ಬೇಡ, ಜನಾಂಗ ಹೆಚ್ಚಾಗಿದ್ದರು ಅನೇಕರು ಅನ್ಯ ಜಾತಿಯವರು ಮೋಸ ಮಾಡುತ್ತಿದ್ದು ಅಂತವರನ್ನು ಪತ್ತೆ ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಕೆಲಸ ನಡೆದಿದೆ.
ಶಾಲಾ ದಾಖಲೆಗಳನ್ನು ತಿದ್ದುಪಡಿ ಮಾಡಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ವಾಲ್ಮೀಕಿ ಸಮಾಜಕ್ಕೆ, ಸಂವಿಧಾನಕ್ಕೆ, ಸರ್ಕಾರಕ್ಕೆ ವಂಚನೆ ಮಾಡುವರ ಮೇಲೆ ಮತ್ತು ಶಾಲಾ ದಾಖಲೆಗಳನ್ನು ತಿದ್ದುಪಡಿ ಮಾಡಿ ನಕಲು ಮಾಡಲು ಸಹಕರಿಸಿದ ಶಾಲೆಯ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ರಾಚಣ್ಣ ನಾಯಕ ತಿಳಿಸಿದರು. ಸಮಾಜದ ಅನೇಕರು ಇದ್ದರು.
ತುಂಬಾ ಒಳ್ಳೆಯ ಕೆಲಸ ಅಣ್ಣ.
ReplyDeleteತುಂಬಾ ಒಳ್ಳೆಯ ಕೆಲಸ ಅಣ್ಣ.
ReplyDeleteSummaniri
ReplyDelete