ದೊರೆನ್ಯೂಸ್: ರಾಷ್ಟ್ರ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಗೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡೂರು ಶಾಲೆಯ ಮಕ್ಕಳು ಆಯ್ಕೆಯಾಗಿದ್ದಾರೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೌಡೂರಿನ ಮಾಲಶ್ರೀ ಮತ್ತು ಜ್ಯೋತಿ ಎಂಬ ಬಾಲಕಿಯರು ರಾಜ್ಯಮಟ್ಟದ ೧೪ ಮತ್ತು ೧೭ ವರ್ಷದ ವಯೋಮಿತಿಯ ಬಾಲಕಿಯರ ಕಬ್ಬಡ್ಡಿ ಪಂದ್ಯಾವಳಿಯ ಮೂಲಕ ರಾಷ್ಟ್ರ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿದ್ದು. ಜಿಲ್ಲೆ ಮತ್ತು ರಾಜ್ಯದ ಕೀರ್ತಿ ಹೆಚ್ಚಳಕ್ಕೆ ಗೌಡೂರು ಶಾಲೆಯ ಬಾಲಕಿಯರು ಕಾರಣವಾದಂತಾಗಿದೆ.
ಬಾಲಕಿಯರ ಸಾಧನೆಗೆ ಜಿಲ್ಲೆಯ ಮೂಲೆ ಮೂಲೆಗಳಿಂದ ಅಭಿನಂದನೆಗಳು ಕೇಳಿಬರುತ್ತಿವೆ. ಇತ್ತ ನಮ್ಮ ಸಮಾಜದ ಬಾಲಕಿಯರು ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ. ಬಾಲಕಿಯರ ಸಾಧನೆಗೆ ಗೌಡೂರು ಗ್ರಾಮದ ವಾಲ್ಮೀಕಿ ನಾಯಕ ಸಮಾಜದ ಮುಖಂಡರು, ಲಿಂಗಸುಗೂರು ತಾಲೂಕಿನ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಸೇರಿದಂತೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
No comments:
Post a Comment