Saturday, September 22, 2018

ವಾಲ್ಮೀಕಿ ಮೂರ್ತಿಗೆ ಅಪಮಾನ ಮಾಡಿದ ಕಿಡಿಗೇಡಿಗಳು : ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ನಾಯಕರು

ದೊರೆನ್ಯೂಸ್:  ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ಕಿಡಿಗೇಡಿಗಳು ಕಲ್ಲಿನಿಂದ ಭಗ್ನಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯ ತಿಳಿಯುತ್ತಿದ್ದಂತೆ ವಾಲ್ಮೀಕಿ ನಾಯಕ ಜನಾಂಗದ ಯುವಕರು ರಾಜ್ಯಹೆದ್ದಾರಿ ಬಂದ್ ಮಾಡಿ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.



ಈ ವೇಳೆ ಸೇರಿದ್ದ ಸಾವಿರಾರು ಜನರು ಗಂಗಾವತಿ -ತಾವರಗೇರಾ ರಸ್ತೆ ತಡೆದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಬಂದ್ ಮಾಡುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ವಾಲ್ಮೀಕಿ ಸಮಾಜದ ಮುಖಂಡರನ್ನು ಸಮಾಧಾನ ಪಡಿಸುವ ಕಾರ್ಯಮಾಡಿದ್ದಾರೆ.
ನೀವು ಎಷ್ಟೇ ಹೇಳಿದ್ರು ನಾವು ಪ್ರತಿಭಟನೆ ನಿಲ್ಲಿಸುವುದಿಲ್ಲ, ಸಮಾಜಕ್ಕೆ ಅಪಮಾನವಾಗಿದೆ, ಮಹರ್ಷಿ ವಾಲ್ಮೀಕಿ ಮೂರ್ತಿ ಅಪಮಾನಗೊಳಿಸಿದವರನ್ನು ಕೂಡಲೇ ಬಂಧಿಸಬೇಕೆಂದು ವಾಲ್ಮೀಕಿ ಸಮಾಜದ ಯುವಕರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರಿಂದ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತಪ್ಪಿತಸ್ಥರನ್ನು ಬಂಧಿಸುತ್ತೇವೆಂದು ಹೇಳಿದ ನಂತರ ಪ್ರತಿಭಟನೆ ಕೈಬಿಟ್ಟಿದ್ದಾರೆ.
ಮಹರ್ಷಿ ವಾಲ್ಮೀಕಿ ಮೂರ್ತಿಗೆ ಅಪಮಾನ ಮಾಡಿದ ಸುದ್ದಿ ವೈರಲ್ ಆಗುತ್ತಿದ್ದು, ಕಿಡಿಗೇಡಿಗಳನ್ನು ಬಂಧಿಸದಿದ್ದರೆ ಸೋಮವಾರ ಉಗ್ರ ಹೋರಾಟ ಮಾಡಲಾಗುತ್ತದೆಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

3 comments:

  1. ವಾಲ್ಮೀಕಿ ಪ್ರತಿಮೆಯನ್ನು ಅವಮಾನ ಮಾಡಿದವರಿಗೆ ಶಿಕ್ಷೆ ಅಗಲೇ ಬೇಕು

    ReplyDelete
  2. ಸಮಾಜದಲ್ಲಿ ಶಾಂತಿ ಕದಡುವ ಯಾರಾದರೂ ಸರಿ ಅವರಿಗೆ ತಕ್ಕ ಶಿಕ್ಷೆ ಆಗಲೇಬೇಕು.

    ReplyDelete