Monday, October 1, 2018

ಬಸ್ ನಿಲ್ದಾಣ ನಿರ್ಮಿಸಲು ಕಾಲೇಜು ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ

ದೊರೆನ್ಯೂಸ್: ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹತ್ತಿರ ಬಸ್ ನಿಲ್ದಾಣ ನಿರ್ಮಿಸಬೇಕೆಂದು ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಲಿಂಗಸುಗೂರಿನ ಶಾಸಕ ಡಿ.ಎಸ್ ಹುಲಿಗೇರಿಗೆ ಮನವಿ ಸಲ್ಲಿಸಿದರು.
ಬಸ್ ನಿಲ್ದಾಣ ನಿರ್ಮಿಸುವ ಕುರಿತು ಶಾಸಕರಿಗೆ ಮನವಿ ಸಲ್ಲಿಸಿ ಸಮಸ್ಯೆಗಳನ್ನು ತಿಳಿಸುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು

ವಿದ್ಯಾರ್ಥಿ ಮುಖಂಡ ಲಕ್ಷ್ಮಣ ನಾಯಕ ನೇತೃತ್ವದಲ್ಲಿ ಕಾಲೇಜು ಆವರಣದಲ್ಲಿ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು, ಕಾಲೇಜು ಪಟ್ಟಣದಿಂದ ದೂರವಿದ್ದ ಕಾರಣ ಸರಿಯಾದ ಸಮಯಕ್ಕೆ ಬರುವುದು, ಹೋಗುವುದು ಆಗುತ್ತಿಲ್ಲ, ನಿಲ್ದಾಣವಿಲ್ಲದ ಕಾರಣ ಬಸ್ ನಿಲ್ಲಿಸಲು ಚಾಲಕರು, ನಿರ್ವಾಹಕರು ಮುಂದಾಗುತ್ತಿಲ್ಲ, ಇದರಿಂದ ಸಮಸ್ಯೆಯಾಗುತ್ತಿದ್ದು ಕಾಲೇಜಿಗಾಗಿ ಬಸ್ ನಿಲ್ದಾಣ ನಿರ್ಮಿಸಿ, ಬಸ್ ನಿಲ್ಲಿಸುವ ವ್ಯವಸ್ಥೆ ಮಾಡಿಕೊಡಬೇಕೆಂದು ವಿನಂತಿಸಿದರು.
ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಶಾಸಕರು ಸ್ಥಳದಲ್ಲೇ   ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ತೊಂದರೆ ಯಾಗದಂತೆ  ಕ್ರಮಕೈಗೊಳ್ಳಿ ಎಂದು ತಿಳಿಸುವ ಮೂಲಕ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರಾದ ಲಕ್ಷ್ಮಣ ನಾಯಕ ಸೇರಿದಂತೆ ಅನೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.
ವರದಿ: ಲಕ್ಷ್ಮಣ ನಾಯಕ ಲಿಂಗಸುಗೂರು

No comments:

Post a Comment