![]() |
ಹನುಮಂತ ಗಂಗಪ್ಪ ನಾಯಕ |
ದೊರೆನ್ಯೂಸ್: ರಾಯಚೂರು ಜಿಲ್ಲೆ ಲಿಂಗಸುಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಹನುಮಂತ ಗಂಗಪ್ಪ ನಾಯಕ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಗುಡ್ಡಗಾಡು ಓಟಕ್ಕೆ ಆಯ್ಕೆಯಾಗಿದ್ದಾನೆಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹಾಂತಗೌಡ ಪಾಟೀಲ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿದ ಅವರು, ವಿದ್ಯಾರ್ಥಿ ಹನುಮಂತ ಗಂಗಪ್ಪ ನಾಯಕ ಗುಲಬರ್ಗಾ ವಿಶ್ವವಿದ್ಯಾಲಯದ ಗುಡ್ಡಗಾಡು ಓಟದಲ್ಲಿ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಇದೇ ನಾಲ್ಕರಂದು ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಗುಡ್ಡಗಾಡು ಓಟದಲ್ಲಿ ಭಾಗವಹಿಸಲಿದ್ದಾನೆ.
ಈ ವಿದ್ಯಾರ್ಥಿಯು ಕಾಲೇಜಿಗೆ ಹಾಗೂ ರಾಯಚೂರು ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಇವರ ಸಾಧನೆಯನ್ನು ಶ್ಲಾಘಿಸಿ ಲಿಂಗಸುಗೂರಿನ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಡಿ.ಎಸ್ ಹೂಲಗೇರಿ, ಪ್ರಾಂಶುಪಾಲರಾದ ಡಾ.ಮಹಾಂತಗೌಡ ಪಾಟೀಲ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಾನಂದ ನರಹಟ್ಟಿ, ಅಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಭಿನಂದಿಸಿ ಶುಭ ಕೋರಿದ್ದಾರೆಂದು ತಿಳಿಸಿದ್ದಾರೆ.
No comments:
Post a Comment