ದೊರೆ ನ್ಯೂಸ್ ಕನ್ನಡ ವಿಶೇಷ ವರದಿ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಚಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳು ಮೊದಲಿಗೆ ಬೆಂಗಳೂರು ಮಹಾನಗರಕ್ಕೆ ಸೀಮಿತವಾಗಿದ್ದವು. ನಂತರ ಅವುಗಳ ವಿಸ್ತರಣೆ ಮಾಡುವ ಮೂಲಕ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭ ಮಾಡಲಾಗಿತ್ತು. ನಂತರದ ದಿನಗಳಲಿ ಇಂದಿರಾ ಕ್ಯಾಂಟೀನ್ ನ ಹೆಸರು ಬದಲಾಯಿಸಲಾಗುತ್ತದೆ ಎಂಬ ಮಾತುಗಳು ಆಗಾಗ ಕೇಳಿಬಂದಿದ್ದವು ಇದೀಗ ಆ ಮಾತು ನಿಜವಾಗುವ ಲಕ್ಷಣಗಳು ಕಾಣಿಸಿಕೊಂಡಿವೆ.
ಸಮ್ಮಿಶ್ರ ಸರ್ಕಾರದ ಪತನದ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಸರ್ಕಾರ ರಚನೆಯಾದ ನಂತರ ಇಂದಿರಾ ಕ್ಯಾಂಟೀನ್ ರದ್ದು ಮಾಡ್ತಾರೆ ಅನ್ನೋ ಮಾತುಗಳು ಮೊದಮೊದಲು ಕೇಳಿಬಂದಿದ್ದವು. ಅನೇಕರು ವಿರೋಧ ವ್ಯಕ್ತಪಡಿಸಿದ ಬಳಿಕ ಇಂದಿರಾ ಕ್ಯಾಂಟೀನ್ ರದ್ದು ಮಾಡುವ ಬದಲಿಗೆ ಹೆಸರು ಬದಲು ಮಾಡಲು ಬಿಜೆಪಿ ಸರ್ಕಾರ ಮುಂದಾದಂತೆ ಕಂಡುಬಂದಿದೆ.
ಈಗಾಗಲೇ ಬಿಜೆಪಿ ಶಾಸಕ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಸರ್ಕಾರಕ್ಕೆ ಈ ಕುರಿತು ಪತ್ರ ಬರೆದು ಮನವಿ ಮಾಡಿದ್ದಾರೆ. ಸಚಿವ ಆರ್.ಅಶೋಕ್ ರವರಿಗೆ ಬರೆದ ಪತ್ರದಲ್ಲಿ ನರಸಿಂಹ ನಾಯಕ 'ಇಂದಿರಾ ಕ್ಯಾಂಟೀನ್' ಹೆಸರು ಬದಲಿಸಿ 'ಶ್ರೀ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ' ಎಂದು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ಆದರೆ ಬೆಂಗಳೂರು ನಗರವನ್ನು ಹೊರತುಪಡಿಸಿ ಹೆಸರು ಬದಲಿಸುವಂತೆ ಶಾಸಕ ನರಸಿಂಹ ನಾಯಕ ಮನವಿ ಮಾಡಿರುವುದು ವಿವಿಧ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಇಂದಿರಾ ಗಾಂಧಿ ಒಂದು ಪಕ್ಷಕ್ಕೆ ಸೀಮಿತವಾದವರಾಗುತ್ತಾರೆ. ಅವರ ಹೆಸರಿನ ಕ್ಯಾಂಟೀನ್ ಅನ್ನು ಶ್ರೀ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಅಂತ ಮಾಡುವ ಮೂಲಕ ರಾಮಾಯಣ ಬರೆದ ಮಹಾತ್ಮರ ಹೆಸರು ಇಡುವಂತೆ ನರಸಿಂಹ ನಾಯಕ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಈ ಕುರಿತು ಸಚಿವ ಆರ್.ಅಶೋಕ ಕೂಡ ಪ್ರತಿಕ್ರಿಯೆ ನೀಡಿದ್ದು, ಹೆಸರು ಬದಲಾವಣೆಯ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಹೆಚ್ಚಾಗಿದೆ. ಇನ್ನೂ ಕ್ಯಾಂಟೀನ್ ಗೆ ಹೆಸರಿಡುವ ಮೊದಲು ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಎಂಬುದು ವಾಲ್ಮೀಕಿ ನಾಯಕ ಸಮಾಜದ ಬಹುತೇಕರ ವಾದವಾಗಿದೆ. ಹೆಸರು ಬದಲಾವಣೆಯ ಈ ಪ್ರಸ್ತಾವ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಕಾಯ್ದುನೋಡಬೇಕಿದೆ.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )
No comments:
Post a Comment