![]() |
ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ವಾಲ್ಮೀಕಿ ನಾಯಕರು. |
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ 2020ನೇ ಸಾಲಿನಲ್ಲಿ ನಡೆಯಲಿರುವ ಎರಡನೆಯ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ. ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಗುರುಗಳಾದ ಪ್ರಸನ್ನಾನಂದಪುರಿ ಶ್ರೀಗಳ ನೇತೃತ್ವದಲ್ಲಿ ಈಗಾಗಲೇ ರಾಜ್ಯದ ಅನೇಕ ತಾಲೂಕುಗಳಲ್ಲಿ ಸಭೆ ನಡೆಸಲಾಗಿದ್ದು, ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರು ಹಾಗೂ ದೇವದುರ್ಗ ತಾಲೂಕುಗಳಲ್ಲಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ನಡೆಸಲಾಯಿತು.
ಲಿಂಗಸುಗೂರು: ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಇಂದು ನಡೆದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಎರಡನೆಯ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿಯ ತಾಲೂಕು ಅಧ್ಯಕ್ಷರನ್ನಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಗುಂಡಪ್ಪ ನಾಯಕ ಸರ್ಜಾಪುರ ಅವರನ್ನು ಆಯ್ಕೆ ಮಾಡಲಾಯಿತು.
![]() |
ಗುಂಡಪ್ಪ ನಾಯಕ ಸರ್ಜಾಪುರರವರಿಗೆ ವಾಲ್ಮೀಕಿ ಶ್ರೀಗಳಿಂದ ಸನ್ಮಾನ. |
ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರಾದ ಡಿ.ಜಿ ಗುರಿಕಾರ್, ನಂದೇಶ್ ನಾಯಕ, ಭೀಮಣ್ಣ ನಾಯಕ, ಪಿಡ್ಡನಗೌಡ, ಗಂಗಮ್ಮ, ಹುಲುಗಪ್ಪ ನಾಯಕ ಸೇರಿದಂತೆ ಅನೇಕರಿದ್ದರು.
![]() |
ದೇವದುರ್ಗದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪ್ರಸನ್ನಾನಂದಪುರಿ ಶ್ರೀಗಳೊಂದಿಗೆ ರಾಚಣ್ಣ ನಾಯಕ. |
ದೇವದುರ್ಗ: ಇಂದು ಪಟ್ಟಣದ ಐಬಿಯಲ್ಲಿ ಎರಡನೆಯ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆಸಲಾಯಿತು. ವಾಲ್ಮೀಕಿ ಗುರುಪೀಠದ ಗುರುಗಳಾದ ಪ್ರಸನ್ನಾನಂದಪುರಿ ಶ್ರೀಗಳು ನೇತೃತ್ವ ವಹಿಸಿಕೊಂಡಿದ್ದರು.
ಸಭೆಯಲ್ಲಿ 2020ನೇ ಸಾಲಿನ ಜಾತ್ರಾ ಮಹೋತ್ಸವ ಸಮಿತಿಯ ದೇವದುರ್ಗ ತಾಲೂಕಿನ ಅಧ್ಯಕ್ಷರನ್ನಾಗಿ ನಿವೃತ್ತ ತಹಶಿಲ್ದಾರ ವೆಂಕನಗೌಡ ಪಾಟೀಲರನ್ನು ಆಯ್ಕೆ ಮಾಡಲಾಯಿತು.
ಈ ಸಭೆಯಲ್ಲಿ 2019ನೇ ಸಾಲಿನ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರು, ಮಹಿಳಾ ಸಂಘದ ಅಧ್ಯಕ್ಷರು, ನೌಕರರ ಸಂಘದ ಅಧ್ಯಕ್ಷರು ಸೇರಿದಂತೆ ವಾಲ್ಮೀಕಿ ನಾಯಕ ಸಮಾಜದ ನೂರಾರು ಜನರು ಪಾಲ್ಗೊಂಡಿದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )
No comments:
Post a Comment