ಸಾಂಕ್ರಾಮಿಕ ರೋಗ ಹೆಚ್ಚಳಕ್ಕೆ ಕಾರಣವಾಗ್ತಾರಾ ಪಾಮನಕಲ್ಲೂರು ಪಿಡಿಒ..!?
ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ಅನೇಕ ಕಡೆಗಳಲ್ಲಿ ಚರಂಡಿಗಳು ತುಂಬಿದ್ದು, ಅಧಿಕಾರಿಗಳು ಮಾತ್ರ ಡೊಂಟ್ ಕೇರ್ ಅಂತಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತ ಪಡಿಸಿದ್ದಾರೆ.
ಗ್ರಾಮದ ಮುಖ್ಯ ರಸ್ತೆಯಲ್ಲಿ ಬರುವ ಬಂಗಾರದ ಅಂಗಡಿ (ಕುರುಡಿಯವರ ಹೊಲ) ಹತ್ತಿರದ ಚರಂಡಿ ಕೊಳಚೆ ನೀರು, ವಿವಿಧ ಪ್ಲಾಸ್ಟಿಕ್ ವಸ್ತುಗಳಿಂದು ತುಂಬಿದ್ದು ಹತ್ತಿರದ ಮನೆಗಳಲ್ಲಿ ವಾಸಿಸುವ ನಾವು ದುರ್ನಾತದೊಡನೆ ಜೀವನ ನಡೆಸುವಂತಾಗಿದೆ ಎಂದು ಸ್ಥಳೀಯರು ಬೇಸರ ವ್ಯಕ್ತ ಪಡಿಸಿದ್ದಾರೆ.
ಈಗಾಗಲೇ ಜಗತ್ತಿನಾದ್ಯಂತ ಕೊರೊನಾ ಸಂಕಷ್ಟ ಎದುರಾಗಿದ್ದು, ಲಾಕ್ ಡೌನ್ ನಿಂದಾಗಿ ಎಲ್ಲೂ ಕೆಲಸವಿಲ್ಲದೆ ಮನೆಯಲ್ಲಿ ಜೀವನ ಕಳೆಯುವ ಪರಿಸ್ಥಿತಿ ಎದುರಾಗಿದೆ. ದಿನವಿಡೀ ಮನೆಯಲ್ಲಿಯೇ ಇರುವ ನಾವು ಚರಂಡಿಯ ಕೆಟ್ಟ ವಾಸನೆ ಸೇವಿಸುತ್ತಿದ್ದೇವೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭಯ ಉಂಟಾಗಿದೆ.
ಚರಂಡಿ ಸ್ವಚ್ಛಗೊಳಿಸುವಂತೆ ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷರು, ಪಿಡಿಒ ಸೇರಿದಂತೆ ಅನೇಕರಿಗೆ ನಾವು ಅನೇಕ ಬಾರಿ ಮನವಿ ಮಾಡಿದ್ದೇವೆ. ಆದ್ರೆ ಇದುವರೆಗೂ ಯಾರೊಬ್ಬರೂ ಚರಂಡಿ ಸ್ವಚ್ಛಗೊಳಿಸುವ ಕೆಲಸಕ್ಕೆ ಮುಂದಾಗಿಲ್ಲ.
ನಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಸುವ ಪ್ರಯತ್ನ ಮಾಡಿದರು ಪಿಡಿಒ ಮಾತ್ರ ಡೊಂಟ್ ಕೇರ್ ಅಂತಿದ್ದಾರೆ. ಸ್ಥಳಕ್ಕೆ ಬಂದು ಸಮಸ್ಯೆ ಪರಿಹರಿಸುವ ಕೆಲಸ ಮಾಡುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳೇ ಹೀಗೆ ಮಾಡಿದರೆ ನಾವು ಯಾರನ್ನು ಕೇಳ್ಬೇಕು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಹಿಂದೆ ಅನೇಕ ಬಾರಿ ಚರಂಡಿ ಸ್ವಚ್ಛಗೊಳಿಸಿದಾಗ ಚರಂಡಿಯಿಂದ ತೆಗೆದ ಕಸವನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆ ಕಸ ಮಳೆ, ಗಾಳಿ, ವಾಹನಗಳ ಓಡಾಟದಿಂದಾಗಿ ಮತ್ತೆ ಚರಂಡಿ ಸೇರಿ ಕೊಂಡಿದೆ. ಇನ್ನುಮುಂದೆ ಚರಂಡಿ ಸ್ವಚ್ಛಗೊಳಿಸಿದ ನಂತರ ಅಲ್ಲಿನ ಕಸವನ್ನು ವಿಲೇವಾರಿ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Good news brother
ReplyDelete