Saturday, August 15, 2020

'ಬೆಳೆ ಸಮೀಕ್ಷೆ' ಸರ್ಕಾರಿ ಸೌಲಭ್ಯಗಳಿಗೆ ಅವಶ್ಯಕ: ಶ್ರೀಶೈಲ್ ಬಿ.ಆರ್


ದೊರೆ ನ್ಯೂಸ್ ಕನ್ನಡ, ರಾಯಚೂರು (ಆ.15):
ಸರ್ಕಾರ ಜಾರಿಗೆ ತಂದಿರುವ 'ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್ಲೋಡ್ ಮಾಡುವ ವಿನೂತನ ಯೋಜನೆ' "ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್" (2020-21ನೇ ಸಾಲಿನ ಬೆಳೆ ಸಮೀಕ್ಷೆ ಯೋಜನೆ) ಅಡಿಯಲ್ಲಿ ಬೆಳೆ ನೊಂದಾಯಿಸುವ ಮೂಲಕ ರೈತರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಸಹಾಯಕ ಕೃಷಿ ಅಧಿಕಾರಿ ಶ್ರೀಶೈಲ್ ಬಿ.ಆರ್ ರವರು ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ನಡೆಸುವ ವೇಳೆ ಮಾತನಾಡಿದ ಅವರು, ಪಾಮನಕಲ್ಲೂರು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆಗಳ ಸಮೀಕ್ಷೆ ಪ್ರಾರಂಭವಾಗುತ್ತಿದ್ದು. ರೈತರು ಈ ವರ್ಷ ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನ ತಾವೇ ಮಾಡಿಕೊಳ್ಳಬಹುದಾಗಿದೆ. ಸರ್ಕಾರ "ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್" ಮೂಲಕ ರೈತರು ಬೆಳೆ ಸಮೀಕ್ಷೆ ನಡೆಸುವ ಅವಕಾಶ ಕಲ್ಪಿಸಿಕೊಟ್ಟಿದೆ.
ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಆ್ಯಪ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕಾಗಿದ್ದು. ಆ್ಯಪ್ ಮೂಲಕ ಬೆಳೆ ನೊಂದಾಯಿಸುವ ಮೂಲಕ ರೈತರು ಕಾಲಕಾಲಕ್ಕೆ ದೊರೆಯುವ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಈ ಯೋಜನೆ ಅನುಕೂಲವಾಗುವ ಸಾಧ್ಯತೆ ಇದೆ ಎಂದು ಶ್ರೀಶೈಲ್ ಬಿ.ಆರ್ ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂದಿಗಳಾದ ಜಯಶ್ರೀ ವಸ್ತ್ರದ್, ಚಂದನಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಅನೇಕ ಅಧಿಕಾರಿಗಳು, ರೈತರು ಇದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.

ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು  ಇದ್ದಲ್ಲಿ ಇಮೇಲ್ ಮಾಡಿ: ( dorenewskannada@gmail.com ) ಹಾಗೂ ದೊರೆ ನ್ಯೂಸ್ ಕನ್ನಡ ವೆಬ್ ಸೈಟ್ (ಬ್ಲಾಗ್), ಫೇಸ್ಬುಕ್ ಖಾತೆ, ಫೇಸ್ಬುಕ್ ಪೇಜ್, ಫೇಸ್ಬುಕ್ ಗ್ರುಪ್, ಯೂಟ್ಯೂಬ್ ಚ್ಯಾನಲ್ ಗಳನ್ನು ಪ್ರೋತ್ಸಾಹಿಸುವ ಮೂಲಕ ನಮ್ಮ ಕಿರು ಪ್ರಯತ್ನಕ್ಕೆ ಸಹಕರಿಸಿ ಮಿತ್ರರೇ..

No comments:

Post a Comment