ಬೀದರ್ (ಫೆ.07): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಳಾರ (ಬಿ) ಗ್ರಾಮದ ರುದ್ರಭೂಮಿ (ಸ್ಮಶಾನ ಭೂಮಿ)ಯ ಸಮಸ್ಯೆ ಪರಿಹಾರಕ್ಕಾಗಿ ಸಹಾಯಕ ಆಯುಕ್ತರು, ತಹಶೀಲ್ದಾರರು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಸೋಮವಾರ ಆಗಮಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ನೂತನವಾಗಿ ನಿರ್ಮಾಣವಾಗುತ್ತಿರುವ ಜೈಲ್ ಕಟ್ಟಡದ ಹತ್ತಿರವಿರುವ ವಿವಿಧ ಸಮುದಾಯಗಳ ಸ್ಮಶಾನ ಭೂಮಿಯ ಸಮಸ್ಯೆ ಪರಿಹರಿಸಿದರು. ಬಳಿಕ ಗ್ರಾಮ ಸಂಚಾರ ನಡೆಸಿ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.
ತಮ್ಮ ಕೋಟಾದಲ್ಲೇ ಮನೆ ನಿರ್ಮಿಸಿ ಕೊಡುವ ಭರವಸೆ:
ಅವರಿಗೆ ಬೇರೆ ಯಾವುದೇ ಮನೆ ಇಲ್ಲ. ತೀರ ಬಡವರು ಎಂಬುದು ಖಾತ್ರಿಯಾಗುತ್ತಿದ್ದಂತೆ ಅವರಿಗೆ ತಮ್ಮ ಕೋಟಾದಲ್ಲಿಯೇ ಮನೆ ನಿರ್ಮಿಸಿ ಕೊಡುವ ಭರವಸೆಯನ್ನು ಶಾಸಕರು ನೀಡಿದರು. ಶಾಸಕರ ಕ್ರಮಕ್ಕೆ ಅನೇಕರು ಸಂತಸ ವ್ಯಕ್ತಪಡಿಸಿದರು. ಬಡವರನ್ನು ಗುರುತಿಸಿ ಅವರಿಗೆ ಸೌಲಭ್ಯ ಕಲ್ಪಿಸಿಕೊಡುವ ಕೆಲಸವಾಗಬೇಕಾಗಿದೆ ಎಂದು ಶಾಸಕರು ಹೇಳಿದರು.
ಗ್ರಾಮದ ವಿವಿಧ ಓಣಿಗಳಿಗೆ ಭೇಟಿ ನೀಡಿ ಗ್ರಾಮಸ್ಥರನ್ನು ಮಾತನಾಡಿಸಿದ ಶಾಸಕರು, ಗ್ರಾಮದಲ್ಲಿನ ಸಮಸ್ಯೆಗಳನ್ನು ಆಲಿಸಿ, ಹಂತಹಂತವಾಗಿ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿದರು. ಸ್ಥಳೀಯ ಮುಖಂಡರು, ಗ್ರಾಮ ಪಂಚಾಯತಿ ಅಧ್ಯಕ್ಷ, ಸದಸ್ಯರು, ಗ್ರಾಮ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ಕೆಲಸ ಮಾಡಬೇಕು.
ತಮ್ಮಿಂದ ಪರಿಹಾರ ಒದಗಿಸಲಾಗದಂತ ಸಮಸ್ಯೆಗಳಿದ್ದಾಗ ಕೂಡಲೇ ನಮ್ಮ ಗಮನಕ್ಕೆ ತರಬೇಕು. ಸ್ಥಳೀಯರ, ಗ್ರಾಮಸ್ಥರ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸ್ಥಳದಲ್ಲಿದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ತಿಳಿಸಿದರು.
ರುದ್ರಭೂಮಿಯ ಸಮಸ್ಯೆ ಪರಿಹರಿಸುವ ವೇಳೆ ಬೀದರ್ ನ ಸಹಾಯಕ ಆಯುಕ್ತರಾದ ಮೊಹಮ್ಮದ್ ನಯೀಮ್ ಮೋಮಿನ್, ತಹಶೀಲ್ದಾರರಾದ ಅಣ್ಣರಾವ್ ಪಾಟೀಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಾಲ್ಮಣಿ, ಗ್ರಾಮ ಲೆಕ್ಕಾಧಿಕಾರಿ ರೇಣುಕಾ, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.
No comments:
Post a Comment