ಬೀದರ್ (ಆ.10): ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಕಳೆದುಕೊಂಡಿರುವ ರೈತರಿಗೆ ಮೊದಲನೇ ಕಂತಿನಲ್ಲಿ ಕೂಡಲೇ ಎಕರೆಗೆ 25 ಸಾವಿರ ರೂ. ಬೆಳೆ ಹಾನಿ ಪರಿಹಾರ ಒದಗಿಸಿಕೊಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸಿದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಳಾರ ಬಿ ಮತ್ತು ಆಣದೂರಿನ ಜಮೀನುಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಜಮೀನುಗಳಲ್ಲಿ ನೀರು ನಿಂತು ಬೆಳೆ ಹಾನಿ ಸಂಭವಿಸಿದೆ. ಬೆಳೆ ಕಳೆದುಕೊಂಡಿರುವ ರೈತರಿಗೆ ಕೂಡಲೇ ಪರಿಹಾರ ಒದಗಿಸಿಕೊಡುವ ಕೆಲಸವಾಗಬೇಕಾಗಿದೆ ಎಂದರು.
ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ನಾಶವಾಗಿವೆ. ಸಾಮಾನ್ಯ ಪ್ರದೇಶದಲ್ಲಿ ಕೂಡ ಬೆಳೆ ಹಾನಿ ಸಂಭವಿಸಿದೆ. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 53 ಸಾವಿರ ಎಕ್ಟರ್ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಮಾಡಲಾಗಿತ್ತು. ಬಿತ್ತನೆ ಮಾಡಿದ ಬಹುತೇಕ ಬೆಳೆ ಸಂಪೂರ್ಣವಾಗಿ ಹಾನಿಗಿಡಾಗಿವೆ. ಬೆಳೆ ಕಳೆದುಕೊಂಡ ರೈತರಿಗೆ ಮೊದಲನೇ ಕಂತಿನಲ್ಲಿ ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ಒದಗಿಸಿಕೊಡುವ ಕೆಲಸ ಸರ್ಕಾರ ಮಾಡಬೇಕು. ಆ ಮೂಲಕ ರೈತರಿಗೆ ನೆರವಾಗಬೇಕು ಎಂದರು.
ಎರಡು ಮೂರು ದಿನಗಳಲ್ಲಿ ವರದಿ ನೀಡಬೇಕು:
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಭವಿಸಿದ ಬೆಳೆ ಹಾನಿಯ ಸಮೀಕ್ಷೆಯನ್ನು ಕೃಷಿ ಮತ್ತು ಕಂದಾಯ ಇಲಾಖೆಯಿಂದ ಜಂಟಿಯಾಗಿ ನಡೆಸಬೇಕು. ಎರಡು ಮೂರು ದಿನಗಳಲ್ಲಿಯೇ ಬೆಳೆ ಹಾನಿಯ ವರದಿಯನ್ನು ನೀಡಬೇಕು ಎಂದು ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸೂಚಿಸಿದರು.
ಮುಖ್ಯಮಂತ್ರಿಗಳೊಂದಿಗೆ ಮಾತನಾಡುವೆ:
ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸಿ ವರದಿ ನೀಡಿದ ತಕ್ಷಣವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಭೇಟಿಯಾಗಿ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ಮತ್ತು ಜಿಲ್ಲೆಯಲ್ಲಿ ಸಂಭವಿಸಿರುವ ಬೆಳೆ ಹಾನಿಯ ಬಗ್ಗೆ ಮಾಹಿತಿ ನೀಡುತ್ತೇನೆ. ಕೂಡಲೇ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸುತ್ತೇನೆ ಎಂದರು.
ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ:
ಬೆಳೆ ಹಾನಿಗೆ ಸಂಬಂಧಿಸಿದಂತೆ ನಾನು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಕೂಡಲೇ ಪರಿಹಾರ ಒದಗಿಸಿಕೊಡುವಂತೆ ಅಧಿಕಾರಿಗಳಿಗೂ ಸೂಚಿಸಿದ್ದೇನೆ. ಕೃಷಿ ಇಲಾಕೆ, ಕಂದಾಯ ಇಲಾಖೆ ಮತ್ತು ಬೆಳೆ ವಿಮಾ ಕಂಪನಿಯವರೂ ಈ ಭಾಗದಲ್ಲಿ ಸಂಭವಿಸಿದ ಬೆಳೆ ಹಾನಿಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.
ರಸ್ತೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರಿಗೆ ಹದಿನೈದು ದಿನಗಳಲ್ಲಿ ಪರಿಹಾರ ನೀಡುತ್ತಾರೆ. ರೈತರಿಗೆ ಸಮಸ್ಯೆಯಾದರೆ ಯಾಕೇ ಹದಿನೈದು ದಿನಗಳಲ್ಲಿ ಪರಿಹಾರ ನೀಡಲಾಗುತ್ತಿಲ್ಲ. ಸರ್ಕಾರ ರೈತರ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಯಾಕೆ. ನಾನು ಈ ಬಗ್ಗೆ ಅಧಿವೇಶನದಲ್ಲಿ ಕೂಡ ಪ್ರಶ್ನೆ ಮಾಡಿದ್ದೇನೆ. ರೈತರ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಪರವಾಗಿ ಕೆಲಸ ಮಾಡುತ್ತೇವೆ. ರೈತ ಸಾಲಗಾರ ಆಗಬಾರದು. ಆ ರೀತಿಯ ಯೋಜನೆಗಳನ್ನು ನಾವು ಜಾರಿಗೆ ತರುವ ಕೆಲಸ ಮಾಡುತ್ತೇವೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತನಾಡುವೆ:
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಕಾಲುವೆ ನಿರ್ಮಾಣ ಮಾಡದೇ ಇರುವುದರಿಂದ ಅಕ್ಕಪಕ್ಕದ ರೈತರ ಜಮೀನುಗಳಲ್ಲಿ ನೀರು ನಿಲ್ಲುತ್ತಿವೆ. ಇದರಿಂದ ರೈತರು ಬೆಳೆ ಕಳೆದುಕೊಳ್ಳುತ್ತಿದ್ದೇವೆ. ರಸ್ತೆ ಪಕ್ಕದಲ್ಲಿ ಕಾಲುವೆಗಳನ್ನು ನಿರ್ಮಾಣ ಮಾಡಿಸಿಕೊಡಬೇಕೆಂದು ರೈತರು ಶಾಸಕ ಬಂಡೆಪ್ಪ ಖಾಶೆಂಪುರ್ ರವರಿಗೆ ಮನವಿ ಮಾಡಿದರು. ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತನಾಡಿ, ಸಮಸ್ಯೆ ಪರಿಹರಿಸುವಂತೆ ತಿಳಿಸುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಬೀದರ್ ಸಹಾಯಕ ಕೃಷಿ ನಿರ್ದೇಶಕ ದೂಳಪ್ಪ ಹೊಸಳ್ಳಿ, ಕಮಠಾಣಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸುನೀಲ್, ಕಂದಾಯ ನಿರೀಕ್ಷಕ ಜೈಭೀಮ್, ಗ್ರಾಮ ಲೆಕ್ಕಾಧಿಕಾರಿ ರೇಣುಕಾ, ಗ್ರಾಮ ಪಂಚಾಯತಿ ಸದಸ್ಯರಾದ ಖಾಶಿನಾಥ್ ಮೇತ್ರೆ, ಶ್ರೀಮಂತ್ ಸಂಗಪ್ಪ, ಗೌತಮ್, ರೈತರಾದ ಸಿದ್ದರಾಮಪ್ಪ ಕೊಂಗನಕೋಟೆ, ಮಹೇಶ ನಾಗಣ್ಣ, ಮಲ್ಲಿಕಾರ್ಜುನ ಚಂದನಕೇರಿ, ಬಸಪ್ಪ ಕುಂಬಾರವಾಡ, ಮಾರುತಿ ಮೇತ್ರೆ, ಸಂತೋಷ ಬಚ್ಚಾ, ಪ್ರಭಾಸ್ ಹದಿನಾಳೆ, ರೇವಣಪ್ಪ ಕಂದಗಾವ್, ಗಾಳೆಪ್ಪಗೌಡ, ಶರಣಪ್ಪ ಈರಪ್ಪ, ಗಾಳೇಪ್ಪ ಹನುಮಂತಪ್ಪ, ಶಿವಶಂಕರ, ರೇವಣಪ್ಪ, ಅಶೋಕ ಸೇರಿದಂತೆ ಅನೇಕರಿದ್ದರು.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Youth Brigade -R
#Bandeppakhashempur #bandeppa #khashempur #ಬಂಡೆಪ್ಪ #ಖಾಶೆಂಪುರ್ #ಬೀದರ್_ದಕ್ಷಿಣ_ಶಾಸಕರು #bidar_south_mla
No comments:
Post a Comment