"DORE NEWS KANNADA ದೊರೆ ನ್ಯೂಸ್ ಕನ್ನಡ " ಇದು ಕನ್ನಡ ವೆಬ್ ಸೈಟ್ ಆಗಿದ್ದು, ದೇಶದ ಮೂಲೆಮೂಲೆಯಲ್ಲಿನ ನಿಖರ ಸುದ್ದಿಗಳನ್ನು ನಿಮ್ಮ ಮುಂದಿಡುವ ಅಂತರ್ಜಾಲ ತಾಣವಾಗಿದೆ.
Monday, November 28, 2022
ಖಾಶೆಂಪುರ್: ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಮೂರ್ತಿ ಪ್ರತಿಷ್ಠಾಪನೆ; ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ
Sunday, November 27, 2022
ಬೀದರ್ ಕನ್ನಡ ಶ್ರೇಷ್ಠ ಮತ್ತು ವಿಶೇಷ ಕನ್ನಡವಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್
ಬೀದರ್ (ನ.27): ಬೀದರ್ ಕನ್ನಡ ಶ್ರೇಷ್ಠವಾದ ಕನ್ನಡವಾಗಿದೆ. ಪಕ್ಕದಲ್ಲೇ ತೆಲಂಗಾಣ, ಮಹಾರಾಷ್ಟ್ರ ರಾಜ್ಯವಿದ್ದು, ತೆಲಗು, ಮರಾಠಿಗಳ ನಡುವೆ ಕೂಡ ಬೀದರ್ ನಲ್ಲಿರುವ ನಾವು ನಮ್ಮ ತನವನ್ನು ಬಿಟ್ಟುಕೊಡದೆ ನಮ್ಮ ಭಾಷೆಯನ್ನು ಉಳಿಸಿ, ಬೆಳಸಿಕೊಂಡು ಸಾಗುತ್ತಿದ್ದೇವೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ, ಗಂಗನಪಳ್ಳಿ ಪರಿವಾರ, ಸಿಕಿಂದ್ರಾಪೂರ ಪರಿವಾರ ಬೀದರ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೆವರು ರಂಗಮಂದಿರದಲ್ಲಿ ಭಾನುವಾರ ನಡೆದ ಶಿಕ್ಷಕ - ಸಾಹಿತಿ ಡಾ. ಸಂಜುಕುಮಾರ ಅತಿವಾಳೆ ಸಂಪಾದಿಸಿರುವ ಭಾವಗಂಗೆ ಕೃತಿ ಲೋಕಾರ್ಪಣೆ ಹಾಗೂ ಸಾಹಿತಿ - ಕಲಾವಿದರ ಸಂಗಮ ಸಾಂಸ್ಕೃತಿಕ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೀದರ್ ಭಾಷೆಯೇ ದೊಡ್ಡ ಸಾಹಿತ್ಯವಾಗಿದೆ. ಇಲ್ಲಿನ ಕನ್ನಡ ವಿಶೇಷ ಕನ್ನಡವಾಗಿದೆ ಎಂದರು.
ಬೀದರ್ ಭಾಗದ ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಅಭಿಯಾನ ಶುರು ಮಾಡಬೇಕಾಗಿದೆ. ನಮ್ಮ ಕನ್ನಡ ಭಾಷೆಯ ಉಳಿವಿಗಾಗಿ ದೊಡ್ಡಮಟ್ಟದ ಅಭಿಯಾನ ಮಾಡಬೇಕಾಗಿದೆ. ನಾವು ಬೆಂಗಳೂರಿನಂತ ಮಹಾನಗರಗಳ ಕಡೆಗೆ ಹೋಗುತ್ತಿದ್ದೇವೆ. ಆ ಮೂಲಕ ಬೀದರ್ ಭಾಷೆಯನ್ನು ಮರೆಯಿತ್ತಿದ್ದೇವೆ. ಬೀದರ್ ಕನ್ನಡ ದೊಡ್ಡ ಸಾಹಿತ್ಯವಾಗಿದೆ. ಅದನ್ನು ಉಳಿಸಿಕೊಂಡು ಸಾಗಬೇಕಾಗಿದೆ.
ಕನ್ನಡ ಸಾಹಿತ್ಯ, ಕನ್ನಡ ಭಾಷೆ ಉಳಿಸಿದ ಶ್ರೇಯಸ್ಸು ಯಾರಿಗಾದರೂ ಸಿಗುತ್ತದೆ ಎಂದರೇ ಅದು ಬೀದರ್ ನವರಿಗೆ ಸಲ್ಲುತ್ತದೆ. ಸಾಹಿತ್ಯದ ಜೊತೆ ಜೊತೆಗೆ ಬೀದರ್ ಭಾಷೆ ಉಳಿಸುವುದು ಸಹ ನಮ್ಮೆಲ್ಲರ ದೊಡ್ಡಮಟ್ಟದ ಕರ್ತವ್ಯವಾಗಿದೆ. ಭಾಷೆ ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೆಲಸ ಮಾಡೋಣ. ಸಾಹಿತಿಗಳು ಬೀದರ್ ಭಾಷೆ ಉಳಿಸುವ ಕೆಲಸ ಮಾಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ವಿಧಾನ ಪರಿಷತ್ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು ಮಾತನಾಡಿ, ಸಾಹಿತಿ ಗಂಗನಪಳ್ಳಿರವರು ಸಾಹಿತ್ಯಕ್ಕಾಗಿ ಬಹಳಷ್ಟು ಶ್ರಮಿಸಿದ್ದಾರೆ. ಅವರು ಕನ್ನಡ ಸಾಹಿತ್ಯಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ. ಅವರು ಐವತ್ತು ವರ್ಷಗಳಿಂದ ಸಾಹಿತ್ಯ ಸೇವೆಯಲ್ಲಿ ತೊಡಗಿದ್ದಾರೆ. ಅವರ ಸಾಹಿತ್ಯದ ಸೇವೆ ಇವತ್ತು ಪುಸ್ತಕ ರೂಪದಲ್ಲಿ ಹೊರಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಒಬ್ಬ ಹಿರಿಯ ಜೀವಿಯ ಸಾಹಿತ್ಯ ಸೇವೆಯನ್ನು ಗುರುತಿಸುವ ನಿಟ್ಟಿನಲ್ಲಿ ಎಂಬತ್ತೇರಡು ಜನ ಸಾಹಿತಿಗಳು ಮುನ್ನುಡಿ, ಇನ್ನೂಡಿ ಬರೆದಿರುವ ಈ ಪುಸ್ತಕವನ್ನು ಎಲ್ಲರೂ ಖರೀದಿಸಿ ಓದಬೇಕು. ಆ ಮೂಲಕ ಸಾಹಿತಿಗಳಿಗೆ ಶಕ್ತಿ ತುಂಬಬೇಕೆಂದು ವಿಧಾನ ಪರಿಷತ್ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಗಂದಗೆ, ಭಾವಗಂಗೆ ಕೃತಿಯ ಸಂಪಾದಕ ಸಂಜೀವಕುಮಾರ್ ಅತಿವಾಳೆರವರು ಸೇರಿದಂತೆ ಅನೇಕರು ಮಾತನಾಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ, ಹಿರಿಯ ಸಾಹಿತಿ ಎಂ.ಜಿ ಗಂಗನಪಳ್ಳಿ, ಡಾ. ರಾಜಶೇಖರ ಜಮದಂಡಿ, ಪ್ರೊ. ಸಿದ್ರಾಮಪ್ಪ ಮಾಸಿಮಾಡೆ, ಗುರಮ್ಮ ಸಿದ್ದಾರೆಡ್ಡಿ, ಪುಣ್ಯವತಿ ವಿಸಾಜಿ, ಅಮೃತರಾವ್ ಚಿಮಕೋಡೆ, ಸುರೇಶ ಚನ್ನಶೆಟ್ಟಿ, ಕವಿತಾ ಸ್ವಾಮಿ, ಡಾ. ಶಾಮರಾವ್ ನೆಲವಾಡೆ, ರೇಣುಕಾ ಮಳ್ಳಿ, ಲಕ್ಷ್ಮಣ ಮೇತ್ರೆ ಸೇರಿದಂತೆ ಅನೇಕರಿದ್ದರು.
ವಿವಿಧ ಪಕ್ಷ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು
ಬೀದರ್ (ನ.27): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ ಗ್ರಾಮದ ವಿವಿಧ ಪಕ್ಷಗಳ ಕಾರ್ಯಕರ್ತರು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಭಾನುವಾರ ಬೆಳಗ್ಗೆ ಜೆಡಿಎಸ್ ಶಾಲು ಹೊದಿಸುವ ಮೂಲಕ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಜೆಡಿಎಸ್ ಪಕ್ಷ ರೈತರ, ಬಡವರ, ಶ್ರಮಿಕರ ಪರವಾಗಿರುವ ಪಕ್ಷವಾಗಿದೆ. ತಾವು ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಷಯವಾಗಿದೆ. ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ, ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ನೂತನ ಕಾರ್ಯಕರ್ತರಿಗೆ ಕರೆ ನೀಡಿದರು.
ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಶಕ್ತಿ ತುಂಬಬೇಕಾಗಿದೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ತರಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೆಲಸ ಮಾಡಬೇಕು. ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ನಾಡಿನ ಒಳಿತಿಗಾಗಿ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಬೇಕು. ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಏನೆಲ್ಲಾ ಕೆಲಸಗಳನ್ನು ಮಾಡುತ್ತೇವೆ ಎಂಬುದನ್ನು ಸಹ ಮನೆಮನೆಗೂ ಮುಟ್ಟಿಸುವ ಕೆಲಸ ಮಾಡಬೇಕು.
ತಳ ಹಂತದಿಂದ ಪಕ್ಷ ಸಂಘಟನೆ ಮಾಡಬೇಕು. ಮನೆಮನೆಗೂ ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸಿ ಹೇಳಬೇಕು. ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರೂ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕಾಗಿದೆ. ಎಲ್ಲರೂ ಸೇರಿ ಪಕ್ಷವನ್ನು ಬಲಿಷ್ಠಗೊಳಿಸೋಣ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಬಗದಲ್ ನ ನೂತನ ಜೆಡಿಎಸ್ ಕಾರ್ಯಕರ್ತರಾದ ಪ್ರಕಾಶ, ಸಿಮನ್, ವಿಲ್ಸನ್, ಶ್ರೀಮಂತ್, ರಮೇಶ್, ಸಾಲೋಮನ್, ಜೀವನ್, ಸುನೀಲ್, ರಾಜು, ಪ್ರಕಾಶ (ದುಬೈ), ಸುನೀಲ್ ಸಿರ್ಸಿ, ಸಂಜುಕುಮಾರ್, ಓಂಕಾರ, ರಾಹುಲ್, ರತನ್ ಪ್ರಕಾಶ್, ಪ್ರಲಾದ್, ಗುಂಡಪ್ಪಾ, ವಿಜಯಕುಮಾರ್, ಸಂತೋಷ್, ಆಕಾಶ್, ನೌನಾಥ್, ಪ್ರಕಾಶ್, ಶ್ರೀಮಂತ, ತುಕ್ಕರಾಮ್, ಮಚೇಂದ್ರ, ಧನರಾಜ್, ಬಸವರಾಜ ಸೇರಿದಂತೆ ಅನೇಕರಿದ್ದರು.
Monday, November 21, 2022
ಮಹಾತ್ಮರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗೋಣ: ಶಾಸಕ ಬಂಡೆಪ್ಪ ಖಾಶೆಂಪುರ್
ಬೀದರ್ (ನ.21): ಮಹಾತ್ಮರ ಇತಿಹಾಸ ತಿಳಿದುಕೊಳ್ಳುವ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ. ಮಹಾತ್ಮರ ತತ್ವಾದರ್ಶಗಳನ್ನು ಪಾಲಿಸೋಣ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
Thursday, November 10, 2022
ಚಾಂಗಲೇರಾ ಪುಣ್ಯಕ್ಷೇತ್ರವಾಗಿದೆ, ವೀರಭದ್ರೇಶ್ವರ ಮಹಿಮೆ ಅಪಾರವಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್
![]() |
ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್ |
Sunday, November 6, 2022
ಬೇಮಳಖೇಡ ಅಪಘಾತ ಪ್ರಕರಣ: ಉಡಮನಳ್ಳಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ವೈಯಕ್ತಿಕ ಧನಸಹಾಯ ಮಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್
![]() |
ಉಡಮನಳ್ಳಿ ಗ್ರಾಮದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ |
+++++++++++++++++++
ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಮಹಿಳೆಯರ ಆರೋಗ್ಯ ವಿಚಾರಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್
Saturday, November 5, 2022
ಬೇಮಳಖೇಡ ಅಪಘಾತ ಪ್ರಕರಣ: ಪರಿಹಾರಕ್ಕಾಗಿ ಸಿಎಂಗೆ ಪತ್ರ ಬರೆದ ಶಾಸಕ ಬಂಡೆಪ್ಪ ಖಾಶೆಂಪುರ್
![]() |
ಸಿಎಂ ಬೊಮ್ಮಾಯಿಗೆ ಶಾಸಕ ಖಾಶೆಂಪುರ್ ಪತ್ರ |
![]() |
ಶಾಸಕ ಬಂಡೆಪ್ಪ ಖಾಶೆಂಪುರ್ |