ಬೀದರ್ (ನ.04): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಮಳಖೇಡದ ಬಳಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಉಡಮನಳ್ಳಿಗೆ ಹೋಗುತ್ತಿದ್ದ ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಏಳು ಜನ ಕೂಲಿ ಕಾರ್ಮಿಕರು ಮೃತಪಟ್ಟಿದ್ದು, 08 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗುತ್ತಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ದುಃಖ ವ್ಯಕ್ತಪಡಿಸಿದ್ದಾರೆ.
ಬೇಮಳಖೇಡದ ಬಳಿ ಲಾರಿ ಮತ್ತು ಆಟೋ ನಡುವೆ ಶುಕ್ರವಾರ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಗಳಲ್ಲಿ ಪೋಸ್ಟ್ ಮಾಡಿರುವ ಅವರು, 'ನನ್ನ ವಿಧಾನಸಭಾ ಕ್ಷೇತ್ರವಾದ ಬೀದರ್ ದಕ್ಷಿಣ ಕ್ಷೇತ್ರದ ಬೇಮಳಖೇಡದ ಬಳಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಉಡಮನಳ್ಳಿಗೆ ಹೋಗುತ್ತಿದ್ದ ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಏಳು ಜನ ಕೂಲಿ ಕಾರ್ಮಿಕರು ಮೃತಪಟ್ಟಿದ್ದು, 08 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗುತ್ತಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ಘಟನೆ ಕುರಿತು ನಾನು ಈಗಾಗಲೇ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇನೆ. ಆದಷ್ಟು ಬೇಗ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದ್ದೇನೆ' ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Bandeppa Khashempur/ಬಂಡೆಪ್ಪ ಖಾಶೆಂಪುರ್ Bandeppa Khashempur Youth Brigade -R Bandeppa Kashempur Basavaraj Bommai Fans Club Basavaraj Bommai
No comments:
Post a Comment