ಬೀದರ್ (ನ.27): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ ಗ್ರಾಮದ ವಿವಿಧ ಪಕ್ಷಗಳ ಕಾರ್ಯಕರ್ತರು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಭಾನುವಾರ ಬೆಳಗ್ಗೆ ಜೆಡಿಎಸ್ ಶಾಲು ಹೊದಿಸುವ ಮೂಲಕ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಜೆಡಿಎಸ್ ಪಕ್ಷ ರೈತರ, ಬಡವರ, ಶ್ರಮಿಕರ ಪರವಾಗಿರುವ ಪಕ್ಷವಾಗಿದೆ. ತಾವು ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಷಯವಾಗಿದೆ. ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ, ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ನೂತನ ಕಾರ್ಯಕರ್ತರಿಗೆ ಕರೆ ನೀಡಿದರು.
ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಶಕ್ತಿ ತುಂಬಬೇಕಾಗಿದೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ತರಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೆಲಸ ಮಾಡಬೇಕು. ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ನಾಡಿನ ಒಳಿತಿಗಾಗಿ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಬೇಕು. ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಏನೆಲ್ಲಾ ಕೆಲಸಗಳನ್ನು ಮಾಡುತ್ತೇವೆ ಎಂಬುದನ್ನು ಸಹ ಮನೆಮನೆಗೂ ಮುಟ್ಟಿಸುವ ಕೆಲಸ ಮಾಡಬೇಕು.
ತಳ ಹಂತದಿಂದ ಪಕ್ಷ ಸಂಘಟನೆ ಮಾಡಬೇಕು. ಮನೆಮನೆಗೂ ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸಿ ಹೇಳಬೇಕು. ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರೂ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕಾಗಿದೆ. ಎಲ್ಲರೂ ಸೇರಿ ಪಕ್ಷವನ್ನು ಬಲಿಷ್ಠಗೊಳಿಸೋಣ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಬಗದಲ್ ನ ನೂತನ ಜೆಡಿಎಸ್ ಕಾರ್ಯಕರ್ತರಾದ ಪ್ರಕಾಶ, ಸಿಮನ್, ವಿಲ್ಸನ್, ಶ್ರೀಮಂತ್, ರಮೇಶ್, ಸಾಲೋಮನ್, ಜೀವನ್, ಸುನೀಲ್, ರಾಜು, ಪ್ರಕಾಶ (ದುಬೈ), ಸುನೀಲ್ ಸಿರ್ಸಿ, ಸಂಜುಕುಮಾರ್, ಓಂಕಾರ, ರಾಹುಲ್, ರತನ್ ಪ್ರಕಾಶ್, ಪ್ರಲಾದ್, ಗುಂಡಪ್ಪಾ, ವಿಜಯಕುಮಾರ್, ಸಂತೋಷ್, ಆಕಾಶ್, ನೌನಾಥ್, ಪ್ರಕಾಶ್, ಶ್ರೀಮಂತ, ತುಕ್ಕರಾಮ್, ಮಚೇಂದ್ರ, ಧನರಾಜ್, ಬಸವರಾಜ ಸೇರಿದಂತೆ ಅನೇಕರಿದ್ದರು.
No comments:
Post a Comment