ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಗೌಡೂರಿನ ಜಯಶ್ರೀ
![]() |
ಪ್ರಶಸ್ತಿ ಸ್ವೀಕರಿಸಿದ ಜಯಶ್ರೀ |
ದೊರೆ ನ್ಯೂಸ್ ಕನ್ನಡ / Dore News Kannada
ರಾಯಚೂರು (ಜ.30): ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಯಶ್ರೀ ತಂದೆ ಜಗದೀಶ್ ಎಂಬ ವಿದ್ಯಾರ್ಥಿನಿ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.
2023-24 ನೇ ಸಾಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಹಾಗೂ ಸ್ಪರ್ಶ ಟ್ರಸ್ಟ್ ಸಹಯೋಗದೊಂದಿಗೆ ರಾಯಚೂರು ನಗರದಲ್ಲಿ ಸೋಮವಾರ ನಡೆದ ABCD ಯೋಜನೆಯ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಜಯಶ್ರೀಗೆ ತೃತೀಯ ಸ್ಥಾನ ದೊರೆತಿದ್ದು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆರವರು ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದ್ದಾರೆ.
ಇನ್ನೂ ವಿದ್ಯಾರ್ಥಿಯ ಸಾಧನೆಗೆ ಮಾಜಿ ತಾ.ಪಂ ಸದಸ್ಯರಾದ ರಾಜಾ ಶೇತುರಾಮ್ ನಾಯಕ, ಶಾಲೆಯ ಮುಖ್ಯೋಪಾಧ್ಯಾಯರಾದ ವಿದ್ಯಾವತಿ, ಸಹ ಶಿಕ್ಷಕರಾದ ಮೊಹಮ್ಮದ್ ಫರಿದ್ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
No comments:
Post a Comment